Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 11

ಅರಣ್ಯ 11:23-34

Help us?
Click on verse(s) to share them!
23ಯೆಹೋವನು ಮೋಶೆಗೆ, “ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ” ಎಂದು ಹೇಳಿದನು.
24ಮೋಶೆ ಹೊರಟುಹೋಗಿ ಯೆಹೋವನ ಮಾತುಗಳನ್ನು ಜನರಿಗೆ ತಿಳಿಸಿದನು ಮತ್ತು ಅವನು ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.
25ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.
26ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.
27ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು.
28ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.
29ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.
30ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
31ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.
32ಇಸ್ರಾಯೇಲರು ಆ ದಿನವೆಲ್ಲಾ, ರಾತ್ರಿಯೆಲ್ಲಾ, ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಯಾರು ಹತ್ತು ಹೋಮೆರಿಗಿಂತ ಕಡಿಮೆ ಕೂಡಿಸಿಕೊಳ್ಳಲಿಲ್ಲ. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.
33ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.
34ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು.

Read ಅರಣ್ಯ 11ಅರಣ್ಯ 11
Compare ಅರಣ್ಯ 11:23-34ಅರಣ್ಯ 11:23-34