Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 13

ಅರಣ್ಯ 13:3-19

Help us?
Click on verse(s) to share them!
3ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.
4ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,
5ಸಿಮೆಯೋನ್ ಕುಲದ ಹೋರಿಯನ ಮಗನಾದ ಶಾಫಾಟ್,
6ಯೆಹೂದ ಕುಲದ ಯೆಫುನ್ನೆಯನ ಮಗನಾದ ಕಾಲೇಬ್,
7ಇಸ್ಸಾಕಾರ್ ಕುಲದ ಯೋಸೇಫನ ಮಗನಾದ ಇಗಾಲ್,
8ಎಫ್ರಾಯೀಮ್ ಕುಲದ ನೂನನ ಮಗನಾದ ಹೋಶೇಯ,
9ಬೆನ್ಯಾಮೀನ್ ಕುಲದ ರಾಫೂವನ ಮಗನಾದ ಪಲ್ಟೀ,
10ಜೆಬುಲೂನ್ ಕುಲದ ಸೋದೀಯನ ಮಗನಾದ ಗದ್ದೀಯೇಲ್,
11ಯೋಸೇಫ್ ಅಂದರೆ ಮನಸ್ಸೆ ಕುಲದ ಸೂಸೀಯನ ಮಗನಾದ ಗದ್ದೀ,
12ದಾನ್ ಕುಲದ ಗೆಮಲ್ಲೀಯನ ಮಗನಾದ ಅಮ್ಮೀಯೇಲ್,
13ಆಶೇರ್ ಕುಲದ ಮೀಕಾಯೇಲನ ಮಗನಾದ ಸೆತೂರ್,
14ನಫ್ತಾಲಿ ಕುಲದ ವಾಪೆಸೀಯನ ಮಗನಾದ ನಹಬೀ,
15ಗಾದ್ ಕುಲದ ಮಾಕೀಯನ ಮಗನಾದ ಗೆಯೂವೇಲ್.
16ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.
17ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.
18ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಜನರೋ ಅಥವಾ ಸ್ವಲ್ಪ ಜನರೋ,
19ಅವರ ದೇಶವು ಒಳ್ಳೆಯದೋ ಅಥವಾ ಕೆಟ್ಟದ್ದೋ? ಅವರ ಪಟ್ಟಣಗಳು ಪಾಳೆಯಗಳೋ ಅಥವಾ ಕೋಟೆಗಳೋ?

Read ಅರಣ್ಯ 13ಅರಣ್ಯ 13
Compare ಅರಣ್ಯ 13:3-19ಅರಣ್ಯ 13:3-19