Text copied!
Bibles in Kannada

ಅರಣ್ಯ 13:3-19 in Kannada

Help us?

ಅರಣ್ಯ 13:3-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.
4 ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,
5 ಸಿಮೆಯೋನ್ ಕುಲದ ಹೋರಿಯನ ಮಗನಾದ ಶಾಫಾಟ್,
6 ಯೆಹೂದ ಕುಲದ ಯೆಫುನ್ನೆಯನ ಮಗನಾದ ಕಾಲೇಬ್,
7 ಇಸ್ಸಾಕಾರ್ ಕುಲದ ಯೋಸೇಫನ ಮಗನಾದ ಇಗಾಲ್,
8 ಎಫ್ರಾಯೀಮ್ ಕುಲದ ನೂನನ ಮಗನಾದ ಹೋಶೇಯ,
9 ಬೆನ್ಯಾಮೀನ್ ಕುಲದ ರಾಫೂವನ ಮಗನಾದ ಪಲ್ಟೀ,
10 ಜೆಬುಲೂನ್ ಕುಲದ ಸೋದೀಯನ ಮಗನಾದ ಗದ್ದೀಯೇಲ್,
11 ಯೋಸೇಫ್ ಅಂದರೆ ಮನಸ್ಸೆ ಕುಲದ ಸೂಸೀಯನ ಮಗನಾದ ಗದ್ದೀ,
12 ದಾನ್ ಕುಲದ ಗೆಮಲ್ಲೀಯನ ಮಗನಾದ ಅಮ್ಮೀಯೇಲ್,
13 ಆಶೇರ್ ಕುಲದ ಮೀಕಾಯೇಲನ ಮಗನಾದ ಸೆತೂರ್,
14 ನಫ್ತಾಲಿ ಕುಲದ ವಾಪೆಸೀಯನ ಮಗನಾದ ನಹಬೀ,
15 ಗಾದ್ ಕುಲದ ಮಾಕೀಯನ ಮಗನಾದ ಗೆಯೂವೇಲ್.
16 ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.
17 ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.
18 ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಜನರೋ ಅಥವಾ ಸ್ವಲ್ಪ ಜನರೋ,
19 ಅವರ ದೇಶವು ಒಳ್ಳೆಯದೋ ಅಥವಾ ಕೆಟ್ಟದ್ದೋ? ಅವರ ಪಟ್ಟಣಗಳು ಪಾಳೆಯಗಳೋ ಅಥವಾ ಕೋಟೆಗಳೋ?
ಅರಣ್ಯ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019