Text copied!
Bibles in Kannada

ಅರಣ್ಯ 14:3-6 in Kannada

Help us?

ಅರಣ್ಯ 14:3-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.
4 ಹೀಗೆ ಅವರು ಒಬ್ಬರ ಸಂಗಡಲೊಬ್ಬರು, “ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ” ಎಂದು ಮಾತನಾಡಿಕೊಂಡರು.
5 ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.
6 ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.
ಅರಣ್ಯ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019