Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 15

ಅರಣ್ಯ 15:1-16

Help us?
Click on verse(s) to share them!
1ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
2“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ,
3ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
4ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
5ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.
6“‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,
7ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.
8“‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
9ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
10ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.
11“‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
12ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.
13ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
14ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.
15ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.
16ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”

Read ಅರಣ್ಯ 15ಅರಣ್ಯ 15
Compare ಅರಣ್ಯ 15:1-16ಅರಣ್ಯ 15:1-16