Text copied!
Bibles in Kannada

ಅರಣ್ಯ 15:19-30 in Kannada

Help us?

ಅರಣ್ಯ 15:19-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
20 ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
21 “‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
22 ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,
23 ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,
24 ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
25 ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
26 ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.
27 “‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.
28 ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
29 ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,
30 ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
ಅರಣ್ಯ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019