Text copied!
Bibles in Kannada

ಅರಣ್ಯ 15:2-12 in Kannada

Help us?

ಅರಣ್ಯ 15:2-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ,
3 ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
4 ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
5 ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.
6 “‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,
7 ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.
8 “‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
9 ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
10 ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.
11 “‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
12 ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.
ಅರಣ್ಯ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019