Text copied!
Bibles in Kannada

ಅರಣ್ಯ 15:24-26 in Kannada

Help us?

ಅರಣ್ಯ 15:24-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
25 ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
26 ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.
ಅರಣ್ಯ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019