Text copied!
Bibles in Kannada

ಅರಣ್ಯ 15:29-40 in Kannada

Help us?

ಅರಣ್ಯ 15:29-40 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,
30 ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
31 ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”
32 ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.
33 ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.
34 ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.
35 ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
36 ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.
37 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
38 “ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.
39 ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
40 ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.
ಅರಣ್ಯ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019