Text copied!
Bibles in Kannada

ಅರಣ್ಯ 15:8-22 in Kannada

Help us?

ಅರಣ್ಯ 15:8-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
9 ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
10 ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.
11 “‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
12 ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.
13 ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
14 ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.
15 ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.
16 ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”
17 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
18 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ,
19 ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
20 ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
21 “‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
22 ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,
ಅರಣ್ಯ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019