Text copied!
Bibles in Kannada

ಅರಣ್ಯ 15:9-14 in Kannada

Help us?

ಅರಣ್ಯ 15:9-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
10 ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.
11 “‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
12 ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.
13 ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
14 ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.
ಅರಣ್ಯ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019