Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 16

ಅರಣ್ಯ 16:7-22

Help us?
Click on verse(s) to share them!
7ಅವುಗಳಲ್ಲಿ ಕೆಂಡಗಳನ್ನಿಟ್ಟು ನಾಳೆ ಯೆಹೋವನ ಸನ್ನಿಧಿಯಲ್ಲಿ ಧೂಪಹಾಕಿರಿ. ಆಗ ಯೆಹೋವನು ಯಾರನ್ನು ಮೆಚ್ಚುವನೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ನಿಮ್ಮ ವರ್ತನೆ ಅತಿಯಾಯಿತು” ಎಂದು ಹೇಳಿದನು.
8ಪುನಃ ಮೋಶೆ ಕೋರಹನಿಗೆ, “ಲೇವಿಯ ಸಂತಾನದವರೇ, ಈಗ ಕೇಳಿರಿ,
9ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?
10ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
11ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.
12ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ.
13ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?
14ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಈ ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು.
15ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.
16ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.
17ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.
18ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.
19ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು.
20ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
21“ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.
22ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.

Read ಅರಣ್ಯ 16ಅರಣ್ಯ 16
Compare ಅರಣ್ಯ 16:7-22ಅರಣ್ಯ 16:7-22