Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 18

ಅರಣ್ಯ 18:1-5

Help us?
Click on verse(s) to share them!
1ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.
2ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.
3ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.
4ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.
5ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.

Read ಅರಣ್ಯ 18ಅರಣ್ಯ 18
Compare ಅರಣ್ಯ 18:1-5ಅರಣ್ಯ 18:1-5