Text copied!
Bibles in Kannada

ಅರಣ್ಯ 18:13-21 in Kannada

Help us?

ಅರಣ್ಯ 18:13-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.
14 ಕೇವಲ ಯೆಹೋವನಿಗೋಸ್ಕರ ಇರುವುದಕ್ಕೆ ಇಸ್ರಾಯೇಲರು ಹರಕೆಮಾಡಿ ಸಮರ್ಪಿಸುವುದೆಲ್ಲವೂ ನಿನಗೆ ಸೇರಬೇಕು.
15 ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
16 ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.
17 “ಆಕಳಿನ ಮತ್ತು ಆಡುಕುರಿಗಳ ಚೊಚ್ಚಲುಮರಿಗಳು ದೇವರ ಸೊತ್ತಾಗಿರುವುದರಿಂದ ಅವುಗಳನ್ನು ಬಿಡಬಾರದು. ಅವುಗಳ ರಕ್ತವನ್ನು ಯಜ್ಞವೇದಿಗೆ ಚಿಮುಕಿಸಿಬೇಕು, ಅವುಗಳ ಕೊಬ್ಬನ್ನು ಯೆಹೋವನಿಗೆ ಸುಗಂಧಹೋಮಮಾಡಬೇಕು.
18 ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.
19 ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.
20 ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ.
21 “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
ಅರಣ್ಯ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019