Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 18

ಅರಣ್ಯ 18:2-7

Help us?
Click on verse(s) to share them!
2ನಿನ್ನ ಕುಲದ ಮೂಲಪುರುಷನಾದ ಲೇವಿ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆಮಾಡಿಸಬೇಕು. ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ, ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.
3ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.
4ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.
5ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.
6ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.
7ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.

Read ಅರಣ್ಯ 18ಅರಣ್ಯ 18
Compare ಅರಣ್ಯ 18:2-7ಅರಣ್ಯ 18:2-7