Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 18

ಅರಣ್ಯ 18:27-32

Help us?
Click on verse(s) to share them!
27ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು.
28ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.
29ನಿಮಗೆ ಕೊಡಲ್ಪಡುವ ಸಕಲ ಪದಾರ್ಥಗಳಲ್ಲಿಯೂ ನೀವು ಉತ್ತಮ ಭಾಗವನ್ನೇ ದೇವರ ವಸ್ತುವಾಗುವುದಕ್ಕೆ ಯೋಗ್ಯಭಾಗವನ್ನೇ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಬೇಕು’
30ಆದುದರಿಂದ ನೀನು ಲೇವಿಯರಿಗೆ ಹೀಗೆ ಹೇಳಬೇಕು, ‘ನಿಮಗೆ ದೊರಕಿದ್ದರಲ್ಲಿ ನೀವು ಉತ್ತಮವಾದದ್ದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಉಳಿದದ್ದನ್ನು ಕಣದಲ್ಲಿನ ದವಸದ ಹಾಗೂ, ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ಉಪಯೋಗಿಸಿಕೊಳ್ಳಬಹುದು.
31ನೀವೂ, ನಿಮ್ಮ ಮನೆಯವರೂ ಅದನ್ನು ಎಲ್ಲಾ ಸ್ಥಳಗಳಲ್ಲಿ ಊಟಮಾಡಬಹುದು. ನೀವು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ದೊರೆಯುವ ಪ್ರತಿಫಲ.
32ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’” ಎಂದನು.

Read ಅರಣ್ಯ 18ಅರಣ್ಯ 18
Compare ಅರಣ್ಯ 18:27-32ಅರಣ್ಯ 18:27-32