Text copied!
Bibles in Kannada

ಅರಣ್ಯ 19:12-20 in Kannada

Help us?

ಅರಣ್ಯ 19:12-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.
13 ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.
14 “ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.
15 ಮುಚ್ಚಳ ಹಾಕದೆ ತೆರೆದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು.
16 ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
17 “ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.
18 ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.
19 ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.
20 ಅಶುದ್ಧನಾಗಿ ದೋಷಪರಿಹಾರ ಮಾಡಿಕೊಳ್ಳದವನು ಯೆಹೋವನ ಆಲಯವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಹೋದುದರಿಂದ ಅವನು ಅಶುದ್ಧನಾಗುವನು.
ಅರಣ್ಯ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019