Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 19

ಅರಣ್ಯ 19:4-11

Help us?
Click on verse(s) to share them!
4ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.
5ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.
6ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಸ್ಸೋಪ್ ಗಿಡದ ಬರಲನ್ನೂ, ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಆ ಆಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು.
7ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.
8ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.
9“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.
10ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ.
11“ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

Read ಅರಣ್ಯ 19ಅರಣ್ಯ 19
Compare ಅರಣ್ಯ 19:4-11ಅರಣ್ಯ 19:4-11