Text copied!
Bibles in Kannada

ಅರಣ್ಯ 19:4-11 in Kannada

Help us?

ಅರಣ್ಯ 19:4-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು.
5 ಆಗ ಅವನು ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲಿಯೇ ಸುಡಿಸಿಬಿಡಬೇಕು.
6 ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಸ್ಸೋಪ್ ಗಿಡದ ಬರಲನ್ನೂ, ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಆ ಆಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು.
7 ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.
8 ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.
9 “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.
10 ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ.
11 “ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
ಅರಣ್ಯ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019