Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 19

ಅರಣ್ಯ 19:8-17

Help us?
Click on verse(s) to share them!
8ಆ ಆಕಳನ್ನು ಸುಟ್ಟವನೂ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.
9“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.
10ಆ ಕೆಂದಾಕಳ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಮತ್ತು ಅವರಲ್ಲಿರುವ ಪ್ರವಾಸಿಗರಿಗೂ ಶಾಶ್ವತ ನಿಯಮವಾಗಿದೆ.
11“ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
12ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.
13ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.
14“ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.
15ಮುಚ್ಚಳ ಹಾಕದೆ ತೆರೆದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು.
16ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
17“ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.

Read ಅರಣ್ಯ 19ಅರಣ್ಯ 19
Compare ಅರಣ್ಯ 19:8-17ಅರಣ್ಯ 19:8-17