Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 20

ಅರಣ್ಯ 20:11-17

Help us?
Click on verse(s) to share them!
11ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.
12ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.
13ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು.
14ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.
15ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.
16ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.
17ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.

Read ಅರಣ್ಯ 20ಅರಣ್ಯ 20
Compare ಅರಣ್ಯ 20:11-17ಅರಣ್ಯ 20:11-17