Text copied!
Bibles in Kannada

ಅರಣ್ಯ 20:18-22 in Kannada

Help us?

ಅರಣ್ಯ 20:18-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು.
19 ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು.
20 ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು.
21 ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು.
22 ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.
ಅರಣ್ಯ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019