Text copied!
Bibles in Kannada

ಅರಣ್ಯ 20:22-28 in Kannada

Help us?

ಅರಣ್ಯ 20:22-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಇಸ್ರಾಯೇಲರ ಸರ್ವಸಮೂಹದವರು ಕಾದೇಶಿನಿಂದ ಹೊರಟು ಹೋರ್ ಎಂಬ ಬೆಟ್ಟಕ್ಕೆ ಬಂದರು.
23 ಯೆಹೋವನು ಎದೋಮ್ಯರ ದೇಶದ ಗಡಿಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,
24 “ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.
25 ನೀನು ಆರೋನನನ್ನೂ, ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.
26 ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು” ಎಂದು ಆಜ್ಞಾಪಿಸಿದನು.
27 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು.
28 ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.
ಅರಣ್ಯ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019