Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 21

ಅರಣ್ಯ 21:20-30

Help us?
Click on verse(s) to share them!
20ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.
21ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
22“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.
23ಆದರೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಸೀಹೋನನು ಇಸ್ರಾಯೇಲರಿಗೆ ಅಪ್ಪಣೆಕೊಡದೆ ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು ಅವರನ್ನು ಎದುರಿಸುವುದಕ್ಕೆ ಮರುಭೂಮಿಗೆ ಹೊರಟರು. ಅವನು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
24ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.
25ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
26ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
27ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
28ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.
29ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
30ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”

Read ಅರಣ್ಯ 21ಅರಣ್ಯ 21
Compare ಅರಣ್ಯ 21:20-30ಅರಣ್ಯ 21:20-30