Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 21

ಅರಣ್ಯ 21:24-32

Help us?
Click on verse(s) to share them!
24ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.
25ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.
26ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.
27ಕವಿಗಳು ಹೇಳಿದ ಪದ್ಯವು ಇದರ ವಿಷಯವಾಗಿಯೇ; “ಹೆಷ್ಬೋನಿಗೆ ಬನ್ನಿರಿ. ಅದನ್ನು ಹೊಸದಾಗಿ ಕಟ್ಟಬೇಕು, ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆಮಾಡಬೇಕು.
28ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.
29ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರೇ, ನಿಮಗೆ ದುರ್ಗತಿಯುಂಟಾಯಿತು. ಆತನು ತನ್ನ ಗಂಡುಮಕ್ಕಳನ್ನು ದೇಶಭ್ರಷ್ಟರನ್ನಾಗಿ ಮಾಡಿದನು. ನಿನ್ನ ಹೆಣ್ಣುಮಕ್ಕಳನ್ನು ಸೆರೆಯವರನ್ನಾಗಿಯೂ ಮಾಡಿದ್ದಾನಲ್ಲಾ. ಅಮೋರಿಯರ ಅರಸನಾದ ಸೀಹೋನನಿಗೆ ಸೆರೆಯವರಾದರು.
30ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.”
31ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.
32ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.

Read ಅರಣ್ಯ 21ಅರಣ್ಯ 21
Compare ಅರಣ್ಯ 21:24-32ಅರಣ್ಯ 21:24-32