Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 22

ಅರಣ್ಯ 22:4-15

Help us?
Click on verse(s) to share them!
4ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.
5ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.
6ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.
7ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
8ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.
9ದೇವರು ಬಿಳಾಮನಿಗೆ, “ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?” ಎಂದು ಕೇಳಲು,
10ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನೂ, ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,
11‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.
12ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.
13ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, “ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ” ಎಂದು ಹೇಳಿದನು.
14ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಜೊತೆಯಲ್ಲಿ ಬರಲ್ಲಿಲ” ಎಂದು ತಿಳಿಸಿದರು.
15ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚು ಮಂದಿ ಪ್ರಧಾನರನ್ನು ಕಳುಹಿಸಿದನು.

Read ಅರಣ್ಯ 22ಅರಣ್ಯ 22
Compare ಅರಣ್ಯ 22:4-15ಅರಣ್ಯ 22:4-15