Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 23

ಅರಣ್ಯ 23:13-20

Help us?
Click on verse(s) to share them!
13ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.
14ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
15ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.
16ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು” ಎಂದನು.
17ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು.
18ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.
19ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
20ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.

Read ಅರಣ್ಯ 23ಅರಣ್ಯ 23
Compare ಅರಣ್ಯ 23:13-20ಅರಣ್ಯ 23:13-20