Text copied!
Bibles in Kannada

ಅರಣ್ಯ 23:9-14 in Kannada

Help us?

ಅರಣ್ಯ 23:9-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ; ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ.
10 ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.
11 ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು.
12 ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು.
13 ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.
14 ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
ಅರಣ್ಯ 23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019