Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 24

ಅರಣ್ಯ 24:16-25

Help us?
Click on verse(s) to share them!
16ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.
17ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.
18ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.
19ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು.
20ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”
21ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ, ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.
22ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ? ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.”
23ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು?
24ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.
25ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.

Read ಅರಣ್ಯ 24ಅರಣ್ಯ 24
Compare ಅರಣ್ಯ 24:16-25ಅರಣ್ಯ 24:16-25