Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 24

ಅರಣ್ಯ 24:5-17

Help us?
Click on verse(s) to share them!
5ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.
6ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.
7ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.
8ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು.
9ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.
10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
11ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.
12ಅದಕ್ಕೆ ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ,
13‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’
14ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.
15ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
16ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.
17ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.

Read ಅರಣ್ಯ 24ಅರಣ್ಯ 24
Compare ಅರಣ್ಯ 24:5-17ಅರಣ್ಯ 24:5-17