Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 25

ಅರಣ್ಯ 25:1-10

Help us?
Click on verse(s) to share them!
1ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.
2ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.
3ಹೀಗೆ ಇಸ್ರಾಯೇಲರು ಪೆಗೋರದ ಬಾಳನ ಭಕ್ತರಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.
4ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
5ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, “ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು” ಎಂದು ಆಜ್ಞಾಪಿಸಿದನು.
6ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು.
7ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.
8ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.
9ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.
10ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,

Read ಅರಣ್ಯ 25ಅರಣ್ಯ 25
Compare ಅರಣ್ಯ 25:1-10ಅರಣ್ಯ 25:1-10