Text copied!
Bibles in Kannada

ಅರಣ್ಯ 25:1-10 in Kannada

Help us?

ಅರಣ್ಯ 25:1-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.
2 ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.
3 ಹೀಗೆ ಇಸ್ರಾಯೇಲರು ಪೆಗೋರದ ಬಾಳನ ಭಕ್ತರಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.
4 ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
5 ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, “ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು” ಎಂದು ಆಜ್ಞಾಪಿಸಿದನು.
6 ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು.
7 ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.
8 ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.
9 ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.
10 ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,
ಅರಣ್ಯ 25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019