Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 25

ಅರಣ್ಯ 25:4-14

Help us?
Click on verse(s) to share them!
4ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
5ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, “ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು” ಎಂದು ಆಜ್ಞಾಪಿಸಿದನು.
6ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು.
7ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.
8ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.
9ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.
10ಆಗ ಯೆಹೋವನು ಮೋಶೆಯ ಸಂಗಡ ಮಾತನಾಡಿ,
11“ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ.
12ಆದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆ ಮಾಡಿಕೊಳ್ಳುತ್ತೇನೆ ಎಂದು ಎಲ್ಲರಿಗೂ ತಿಳಿಸು.
13ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
14ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.

Read ಅರಣ್ಯ 25ಅರಣ್ಯ 25
Compare ಅರಣ್ಯ 25:4-14ಅರಣ್ಯ 25:4-14