11ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.
12ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ: ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ಯರು, ಯಾಕೀನನ ವಂಶಸ್ಥರಾದ ಯಾಕೀನ್ಯರು,
13ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ.
14ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.
15ಗಾದ್ ಕುಲದ ಕುಟುಂಬಗಳು ಯಾವುವೆಂದರೆ: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು,
16ಒಜ್ನೀಯ ವಂಶಸ್ಥರಾದ ಒಜ್ನೀಯರು, ಏರೀಯ ವಂಶಸ್ಥರಾದ ಏರೀಯರು,
17ಅರೋದನ ವಂಶಸ್ಥರಾದ ಅರೋದ್ಯರು, ಅರೇಲೀಯ ವಂಶಸ್ಥರಾದ ಅರೇಲೀಯರು ಇವರೇ.
18ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ.
19ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು.
20ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ: ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಹನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.
21ಪೆರೆಚನಿಂದುಂಟಾದ ಕುಟುಂಬಗಳು: ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.
22ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.
23ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ: ತೋಲನ ವಂಶಸ್ಥರಾದ ತೋಲಾಯರು, ಪುವ್ವನ ವಂಶಸ್ಥರಾದ ಪೂನ್ಯರು,
24ಯಾಶೂಬನ ವಂಶಸ್ಥರಾದ ಯಾಶೂಬ್ಯರು, ಶಿಮ್ರೋನನ ವಂಶಸ್ಥರಾದ ಶಿಮ್ರೋನ್ಯರು ಇವರೇ.
25ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ.
26ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ: ಸೆರೆದನ ವಂಶಸ್ಥರಾದ ಸೆರೆದ್ಯರು, ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನ ವಂಶಸ್ಥರಾದ ಯಹಲೇಲ್ಯರು.
27ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ.
28ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.
29ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ: ಮಾಕೀರನ ವಂಶಸ್ಥರಾದ ಮಾಕೀರ್ಯರು, ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ.
30ಗಿಲ್ಯಾದನ ವಂಶದವರು ಯಾರೆಂದರೆ: ಈಯೆಜೆರನ ವಂಶಸ್ಥರಾದ ಈಯೆಜೆರ್ಯರು, ಹೇಲೆಕನ ವಂಶಸ್ಥರಾದ ಹೇಲೆಕ್ಯರು,
31ಅಸ್ರೀಯೇಲನ ವಂಶಸ್ಥರಾದ ಅಸ್ರೀಯೇಲ್ಯರು, ಶೆಕೆಮನ ವಂಶಸ್ಥರಾದ ಶೆಕೆಮ್ಯರು,
32ಶೆಮೀದಾಯನ ವಂಶಸ್ಥರಾದ ಶೆಮೀದಾಯರು, ಹೇಫೆರನ ವಂಶಸ್ಥರಾದ ಹೇಫೆರ್ಯರು ಇವರೇ.
33ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.
34ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.
35ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,
36ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ.
37ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
38ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ: ಬೆಲಗನ ವಂಶಸ್ಥರಾದ ಬೆಲಗ್ಯರು, ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,
39ಶೂಫಾಮನ ವಂಶಸ್ಥರಾದ ಶೂಫಾಮ್ಯರು, ಹೊಫಾಮನ ವಂಶಸ್ಥರಾದ ಹೊಫಾಮ್ಯರು ಇವರೇ.
40ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.
41ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.
42ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು.