Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 26

ಅರಣ್ಯ 26:8-63

Help us?
Click on verse(s) to share them!
8ಪಲ್ಲೂವಿನ ಮಗನು ಎಲೀಯಾಬ್.
9ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.
10ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.
11ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.
12ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ: ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ಯರು, ಯಾಕೀನನ ವಂಶಸ್ಥರಾದ ಯಾಕೀನ್ಯರು,
13ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ.
14ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.
15ಗಾದ್ ಕುಲದ ಕುಟುಂಬಗಳು ಯಾವುವೆಂದರೆ: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು,
16ಒಜ್ನೀಯ ವಂಶಸ್ಥರಾದ ಒಜ್ನೀಯರು, ಏರೀಯ ವಂಶಸ್ಥರಾದ ಏರೀಯರು,
17ಅರೋದನ ವಂಶಸ್ಥರಾದ ಅರೋದ್ಯರು, ಅರೇಲೀಯ ವಂಶಸ್ಥರಾದ ಅರೇಲೀಯರು ಇವರೇ.
18ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ.
19ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು.
20ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ: ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಹನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.
21ಪೆರೆಚನಿಂದುಂಟಾದ ಕುಟುಂಬಗಳು: ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.
22ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.
23ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ: ತೋಲನ ವಂಶಸ್ಥರಾದ ತೋಲಾಯರು, ಪುವ್ವನ ವಂಶಸ್ಥರಾದ ಪೂನ್ಯರು,
24ಯಾಶೂಬನ ವಂಶಸ್ಥರಾದ ಯಾಶೂಬ್ಯರು, ಶಿಮ್ರೋನನ ವಂಶಸ್ಥರಾದ ಶಿಮ್ರೋನ್ಯರು ಇವರೇ.
25ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ.
26ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ: ಸೆರೆದನ ವಂಶಸ್ಥರಾದ ಸೆರೆದ್ಯರು, ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನ ವಂಶಸ್ಥರಾದ ಯಹಲೇಲ್ಯರು.
27ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ.
28ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.
29ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ: ಮಾಕೀರನ ವಂಶಸ್ಥರಾದ ಮಾಕೀರ್ಯರು, ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ.
30ಗಿಲ್ಯಾದನ ವಂಶದವರು ಯಾರೆಂದರೆ: ಈಯೆಜೆರನ ವಂಶಸ್ಥರಾದ ಈಯೆಜೆರ್ಯರು, ಹೇಲೆಕನ ವಂಶಸ್ಥರಾದ ಹೇಲೆಕ್ಯರು,
31ಅಸ್ರೀಯೇಲನ ವಂಶಸ್ಥರಾದ ಅಸ್ರೀಯೇಲ್ಯರು, ಶೆಕೆಮನ ವಂಶಸ್ಥರಾದ ಶೆಕೆಮ್ಯರು,
32ಶೆಮೀದಾಯನ ವಂಶಸ್ಥರಾದ ಶೆಮೀದಾಯರು, ಹೇಫೆರನ ವಂಶಸ್ಥರಾದ ಹೇಫೆರ್ಯರು ಇವರೇ.
33ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.
34ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.
35ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,
36ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ.
37ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
38ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ: ಬೆಲಗನ ವಂಶಸ್ಥರಾದ ಬೆಲಗ್ಯರು, ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,
39ಶೂಫಾಮನ ವಂಶಸ್ಥರಾದ ಶೂಫಾಮ್ಯರು, ಹೊಫಾಮನ ವಂಶಸ್ಥರಾದ ಹೊಫಾಮ್ಯರು ಇವರೇ.
40ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.
41ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.
42ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು.
43ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ.
44ಆಶೇರ್ ಕುಲದ ಕುಟುಂಬಗಳು: ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು, ಇಷ್ವೀಯ ವಂಶಸ್ಥರಾದ ಇಷ್ವೀಯರು, ಬೆರೀಯನ ವಂಶಸ್ಥರಾದ ಬೆರೀಯರು.
45ಬೆರೀಯನ ಮಕ್ಕಳಿಂದುಂಟಾದ ಕುಟುಂಬಗಳು: ಹೇಬೆರನ ವಂಶಸ್ಥರಾದ ಹೇಬೆರ್ಯರು, ಮಲ್ಕೀಯೇಲನ ವಂಶಸ್ಥರಾದ ಮಲ್ಕೀಯೇಲ್ಯರು.
46ಆಶೇರನಿಗೆ ಸೆರಹಳೆಂಬ ಮಗಳು ಸಹ ಇದ್ದಳು.
47ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ.
48ನಫ್ತಾಲಿ ಕುಲದ ಕುಟುಂಬಗಳು: ಯಹಚೇಲನ ವಂಶಸ್ಥರಾದ ಯಹಚೇಲ್ಯರು, ಗೂನೀಯ ವಂಶಸ್ಥರಾದ ಗೂನೀಯರು,
49ಯೇಚೆರನ ವಂಶಸ್ಥರಾದ ಯೇಚೆರ್ಯರು, ಶಿಲ್ಲೇಮನ ವಂಶಸ್ಥರಾದ ಶಿಲ್ಲೇಮ್ಯರು.
50ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ.
51ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730.
52ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
53“ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.
54ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು.
55ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.
56ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.”
57ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು: ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.
58ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ. ಕೆಹಾತನು ಅಮ್ರಾಮನನ್ನು ಪಡೆದನು.
59ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.
60ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು.
61ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು.
62ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.
63ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.

Read ಅರಣ್ಯ 26ಅರಣ್ಯ 26
Compare ಅರಣ್ಯ 26:8-63ಅರಣ್ಯ 26:8-63