Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 10

ಅ. ಕೃ. 10:1-5

Help us?
Click on verse(s) to share them!
1ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.
2ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.
3ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
4ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
5ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.

Read ಅ. ಕೃ. 10ಅ. ಕೃ. 10
Compare ಅ. ಕೃ. 10:1-5ಅ. ಕೃ. 10:1-5