Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 10

ಅ. ಕೃ. 10:24-32

Help us?
Click on verse(s) to share them!
24ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.
25ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.
26ಆದರೆ ಪೇತ್ರನು; “ಏಳು, ನಾನೂ ಸಹಾ ಮನುಷ್ಯನೇ” ಎಂದು ಹೇಳಿ, ಅವನನ್ನು ಎತ್ತಿ,
27ಅವನ ಸಂಗಡ ಸಂಭಾಷಣೆಮಾಡುತ್ತಾ ಮನೆಯೊಳಕ್ಕೆ ಬಂದನು.
28ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.
29ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು.
30ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;
31ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.
32ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.

Read ಅ. ಕೃ. 10ಅ. ಕೃ. 10
Compare ಅ. ಕೃ. 10:24-32ಅ. ಕೃ. 10:24-32