Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 10

ಅ. ಕೃ. 10:37-43

Help us?
Click on verse(s) to share them!
37ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.
38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
39ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.
40ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು.
41ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.
42ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
43ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.

Read ಅ. ಕೃ. 10ಅ. ಕೃ. 10
Compare ಅ. ಕೃ. 10:37-43ಅ. ಕೃ. 10:37-43