Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 10

ಅ. ಕೃ. 10:4-25

Help us?
Click on verse(s) to share them!
4ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
5ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.
6ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ” ಎಂದು ಹೇಳಿದನು.
7ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,
8ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ, ಅವರನ್ನು ಯೊಪ್ಪ ಎಂಬ ಪಟ್ಟಣಕ್ಕೆ ಕಳುಹಿಸಿದನು.
9ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.
10ಅವನಿಗೆ ಬಹಳ ಹಸಿವಾಗಿ ಊಟಮಾಡ ಬಯಸಿದನು. ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ,
11ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.
12ಅದರೊಳಗೆ ಸಕಲ ವಿಧವಾದ ಪಶುಗಳೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳೂ ಇದ್ದವು.
13ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ಅವನಿಗೆ ಒಂದು ವಾಣಿ ಕೇಳಿಸಿತು.
14ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.
15ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು” ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.
16ಹೀಗೆ ಮೂರು ಸಾರಿ ಆಯಿತು. ಆದ ಮೇಲೆ ಆ ವಸ್ತುವು ಆಕಾಶದೊಳಗೆ ಸೇರಿಕೊಂಡಿತು.
17ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;
18ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
19ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
20ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆ” ಎಂದು ಹೇಳಿದನು.
21ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು; “ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?” ಎಂದು ಕೇಳಲು,
22ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.
23ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
24ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.
25ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.

Read ಅ. ಕೃ. 10ಅ. ಕೃ. 10
Compare ಅ. ಕೃ. 10:4-25ಅ. ಕೃ. 10:4-25