Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 11

ಅ. ಕೃ. 11:14-22

Help us?
Click on verse(s) to share them!
14ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.
15ನಾನು ಮಾತನಾಡುವುದಕ್ಕೆ ಪ್ರಾರಂಭಿಸಿದಾಗ, ಪವಿತ್ರಾತ್ಮವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.
16ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.
17ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.
18ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
20ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.
21ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.
22ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.

Read ಅ. ಕೃ. 11ಅ. ಕೃ. 11
Compare ಅ. ಕೃ. 11:14-22ಅ. ಕೃ. 11:14-22