Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 11

ಅ. ಕೃ. 11:2-14

Help us?
Click on verse(s) to share them!
2ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿಮಾಡಿಸಿಕೊಂಡಿದ್ದ ಯೆಹೂದ್ಯರು;
3“ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ” ಎಂದು ಅವನ ಕೂಡ ವಾದಿಸಿದರು.
4ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ,
5ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.
6ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು.
7ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.
8ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು.
9ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.
10ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.
11ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.
12ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.
13ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; “ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.
14ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.

Read ಅ. ಕೃ. 11ಅ. ಕೃ. 11
Compare ಅ. ಕೃ. 11:2-14ಅ. ಕೃ. 11:2-14