Text copied!
Bibles in Kannada

ಅ. ಕೃ. 11:22-26 in Kannada

Help us?

ಅ. ಕೃ. 11:22-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
23 ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.
24 ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.
25 ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.
26 ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
ಅ. ಕೃ. 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019