Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 11

ಅ. ಕೃ. 11:26-30

Help us?
Click on verse(s) to share them!
26ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
27ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
28ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
29ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
30ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.

Read ಅ. ಕೃ. 11ಅ. ಕೃ. 11
Compare ಅ. ಕೃ. 11:26-30ಅ. ಕೃ. 11:26-30