Text copied!
Bibles in Kannada

ಅ. ಕೃ. 11:26-30 in Kannada

Help us?

ಅ. ಕೃ. 11:26-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
27 ಅ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.
28 ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.
29 ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.
30 ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.
ಅ. ಕೃ. 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019