Text copied!
Bibles in Kannada

ಅ. ಕೃ. 12:2-8 in Kannada

Help us?

ಅ. ಕೃ. 12:2-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
3 ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.
4 ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.
5 ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.
6 ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.
7 ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.
8 ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು.
ಅ. ಕೃ. 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019