Text copied!
Bibles in Kannada

ಅ. ಕೃ. 13:19-27 in Kannada

Help us?

ಅ. ಕೃ. 13:19-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.
20 ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
21 ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.
22 ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.
23 “ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.
24 ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
26 “ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
27 ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
ಅ. ಕೃ. 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019