Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 13

ಅ. ಕೃ. 13:46-52

Help us?
Click on verse(s) to share them!
46ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
47ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
48ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
49ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.
50ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
51ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.
52ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.

Read ಅ. ಕೃ. 13ಅ. ಕೃ. 13
Compare ಅ. ಕೃ. 13:46-52ಅ. ಕೃ. 13:46-52