Text copied!
Bibles in Kannada

ಅ. ಕೃ. 14:17-26 in Kannada

Help us?

ಅ. ಕೃ. 14:17-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.
18 ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು.
19 ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
20 ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.
21 ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
22 ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
23 ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.
24 ತರುವಾಯ ಪಿಸಿದ್ಯ ಸೀಮೆಯನ್ನು ಹಾದು ಪಂಫುಲ್ಯ ಸೀಮೆಗೆ ಬಂದು,
25 ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.
26 ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.
ಅ. ಕೃ. 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019