Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 14

ಅ. ಕೃ. 14:21-27

Help us?
Click on verse(s) to share them!
21ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
22ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
23ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.
24ತರುವಾಯ ಪಿಸಿದ್ಯ ಸೀಮೆಯನ್ನು ಹಾದು ಪಂಫುಲ್ಯ ಸೀಮೆಗೆ ಬಂದು,
25ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.
26ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.
27ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.

Read ಅ. ಕೃ. 14ಅ. ಕೃ. 14
Compare ಅ. ಕೃ. 14:21-27ಅ. ಕೃ. 14:21-27