Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 14

ಅ. ಕೃ. 14:4-11

Help us?
Click on verse(s) to share them!
4ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.
5ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,
6ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,
7ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.
8ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.
9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;
10“ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.
11ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.

Read ಅ. ಕೃ. 14ಅ. ಕೃ. 14
Compare ಅ. ಕೃ. 14:4-11ಅ. ಕೃ. 14:4-11